Mysore
30
broken clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಎಫ್‌ಐಆರ್‌: ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಿಷ್ಟು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಆಯುಕ್ತ ದಯಾನಂದ್‌ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಜೀವ ಬೆದರಿಕೆ ಹಾಕಿರುವುದಾಗಿ ಉದ್ಯಮಿ ವಿಜಯ್‌ ಟಾಟಾ ಎಂಬುವವರು ಎಫ್‌ಐಆರ್‌ ದಾಖಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದಯಾನಂದ್‌ ಅವರು, ಪ್ರಕರಣ ಸಂಬಂಧ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದೇನೆ. ಈ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಆಡುಗೋಡಿ ಸಿಎಆರ್‌ ಮೈದಾನದಲ್ಲಿ ಇಂದು ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ವರ್ಗಾವಣೆ ವಿಚಾರವಾಗಿ ಅನೇಕ ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸೂಕ್ತ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ. ಪ್ರತಿನಿತ್ಯ ಕಚೇರಿಗೆ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿ ಬಿಡುತ್ತದೆ. ಹೀಗಾಗಿ ಪೊಲೀಸ್‌ ಸಿಬ್ಬಂದಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ನಾನು ನಿಮ್ಮನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.

 

Tags:
error: Content is protected !!