ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜೀವ ಬೆದರಿಕೆ ಹಾಕಿರುವುದಾಗಿ ಉದ್ಯಮಿ ವಿಜಯ್ ಟಾಟಾ ಎಂಬುವವರು ಎಫ್‌ಐಆರ್ ದಾಖಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದಯಾನಂದ್ ಅವರು, ಪ್ರಕರಣ ಸಂಬಂಧ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದೇನೆ. ಈ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಆಡುಗೋಡಿ ಸಿಎಆರ್ ಮೈದಾನದಲ್ಲಿ ಇಂದು ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ವರ್ಗಾವಣೆ ವಿಚಾರವಾಗಿ ಅನೇಕ ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸೂಕ್ತ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ. ಪ್ರತಿನಿತ್ಯ ಕಚೇರಿಗೆ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿ ಬಿಡುತ್ತದೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ನಾನು ನಿಮ್ಮನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…