ರಾಜ್ಯ

ನಿರ್ಮಲಾ, ಜೆ.ಪಿ.ನಡ್ಡಾ, ವಿಜಯೇಂದ್ರ ವಿರುದ್ಧ ಎಫ್‌ಐಆರ್‌ : ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ತನ್ನ ಆದೇಶದಲ್ಲಿ ತಿಳಿಸಿದೆ.

2018ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್‌ಗಳ ಮೂಲಕ ಬೇರೆ ಬೇರೆ ಸಂಘ-ಸಂಸ್ಥೆಗಳಿಂದ, ನಾಗರಿಕರಿಂದ ದೇಣಿಗೆ ನೀಡುವ ಪದ್ಧತಿಯನ್ನು ಜಾರಿಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ದೇಣಿಗೆಯ ರೂಪದಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ ಮುಖಂಡ ಆದರ್ಶ ಆರ್‌.ಐಯ್ಯರ್‌ ಎಂಬುವವರು ನ್ಯಾಯಾಲಯದಲ್ಲಿ ನಾಗರೀಕ ಹಕ್ಕುಗಳ ಸಂರಕ್ಷಣಾ ಕಾಯ್ದೆಯಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ವಿವಿಧ ಸಂಘ ಸಂಸ್ಥೆಗಳಿಂದ ಬಾಂಡ್‌ಗಳ ಹೆಸರಿನಲ್ಲಿ ಬಿಜೆಪಿಗೆ ಅತಿ ಹೆಚ್ಚು ದೇಣಿಗೆ ಬಂದಿದ್ದು, ಅದೆಲ್ಲವೂ ಬೇನಾಮಿ ಹಣವಾಗಿದೆ. ಇದರಲ್ಲಿ ಸುಮಾರು 8,000 ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಅಯ್ಯರ್‌ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಬಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಕೋರಿದ್ದರು. ಆದರ್ಶ ಅಯ್ಯರ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್‌ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಅನುಮತಿ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

29 mins ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

36 mins ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

1 hour ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

1 hour ago

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

2 hours ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

2 hours ago