ರಾಯಚೂರು: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಯುವಕರು ಹಲವೆಡೆ ಪ್ರತಿಭಟನೆ ಮಾಡಿ ವಿವಿಧ ಠಾಣೆಗಳಲ್ಲಿ ದೂರು ನೀಡಿದ್ದರು.
ಕಾಶೀನಾಥ್ ಎಂಬುವವರು ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಇಂದು ರಮೇಶ್ ಕತ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.



