Mysore
26
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪತನಕ್ಕೆ 1000ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌ ಮನೋಹರ್‌ ದೂರು ನೀಡಿದ್ದರು. ಇದೀಗ ದೂರು ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆಯ ದೂರು ದಾವಣಗೆರೆಯ ಗಾಂಧಿ ನಗರದ ಠಾಣೆಗೆ ವರ್ಗಾವಣೆಗೊಂಡಿದೆ.

ರಾಜ್ಯದ ಮತದಾರರು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿ ಸುಭದ್ರ ಆಡಳಿತ ನಡೆಸಲು ಜನಾದೇಶ ಕೊಟ್ಟಿದ್ದಾರೆ. ಅಧಿಕಾರವಿಲ್ಲದೇ ಹತಾಶರಾಗಿರುವ ಬಿಜೆಪಿಯ ಕೆಲ ನಾಯಕರು ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚೂ ರೂಪಿಸಿದ್ದು, ಇದು ಯತ್ನಾಳ್‌ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಹೇಳಿಕೆ ನೀಡಿದ ಯತ್ನಾಳ್‌ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Tags:
error: Content is protected !!