ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪತನಕ್ಕೆ 1000ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ದೂರು ನೀಡಿದ್ದರು. ಇದೀಗ ದೂರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆಯ ದೂರು ದಾವಣಗೆರೆಯ ಗಾಂಧಿ ನಗರದ ಠಾಣೆಗೆ ವರ್ಗಾವಣೆಗೊಂಡಿದೆ.
ರಾಜ್ಯದ ಮತದಾರರು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿ ಸುಭದ್ರ ಆಡಳಿತ ನಡೆಸಲು ಜನಾದೇಶ ಕೊಟ್ಟಿದ್ದಾರೆ. ಅಧಿಕಾರವಿಲ್ಲದೇ ಹತಾಶರಾಗಿರುವ ಬಿಜೆಪಿಯ ಕೆಲ ನಾಯಕರು ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚೂ ರೂಪಿಸಿದ್ದು, ಇದು ಯತ್ನಾಳ್ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…