ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯೊಬರು ನೀಡಿದ ದೂರಿನ ಆಧಾರದ ಮೇಲೆ ಪ್ರಜ್ವಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಸಂಖ್ಯೆ: 107/2024 ಕಲಂ 354A 354D 506 509 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ ಎಂದು ವರದಿಯಾಗಿದೆ.
ಇಂದು (ಏ.೨೮) ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಆದೇಶ ಹೊರಡಿಸಿದ್ದರು. ಶೀಘ್ರ ತನಿಖಾ ತಂಡ ಪ್ರಜ್ವಲ್ ಅವರನ್ನು ಬಂಧಿಸಲಿದೆ ಎಂದು ತಿಳಿದುಬಂದಿದೆ.





