ರಾಜ್ಯ

ಅಶ್ಲೀಲ ವೀಡಿಯೋ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯೊಬರು ನೀಡಿದ ದೂರಿನ ಆಧಾರದ ಮೇಲೆ ಪ್ರಜ್ವಲ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ಸಂಖ್ಯೆ: 107/2024 ಕಲಂ 354A 354D 506 509 ಐಪಿಸಿ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ ಎಂದು ವರದಿಯಾಗಿದೆ.

ಇಂದು (ಏ.೨೮) ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಆದೇಶ ಹೊರಡಿಸಿದ್ದರು. ಶೀಘ್ರ ತನಿಖಾ ತಂಡ ಪ್ರಜ್ವಲ್‌ ಅವರನ್ನು ಬಂಧಿಸಲಿದೆ ಎಂದು ತಿಳಿದುಬಂದಿದೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

2 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

2 hours ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

5 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

5 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

5 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

5 hours ago