Mysore
33
scattered clouds

Social Media

ಸೋಮವಾರ, 11 ಮೇ 2026
Light
Dark

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇತ್ತೀಚೆಗಷ್ಟೇ ನಟ ಚೇತನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ಹಿರಿಯ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು.

ದೂರಿನನ್ವಯ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಇದೀಗ ಸಾರಾ ಗೋವಿಂದು ಅವರು ಕೂಡ ಚೇತನ್‌ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಈಗಾಗಲೇ ಇಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಡಿಯೋ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಾಕ್ಷಿ ಕಲೆ ಹಾಕಿದ ನಂತರ ನೋಟಿಸ್‌ ನೀಡಲು ಪೊಲೀಸರು ಚಿಂತನೆ ನಡೆಸಿದ್ದು, ಬಳಿಕ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ.

Tags:
error: Content is protected !!