MLA T.S. Srivatsa said he is ready for an open debate with CM Siddaramaiah.
ಬೆಂಗಳೂರು: ಕುರುಬ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೈಸೂರಿನ ಕೆ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀ ವತ್ಸ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐ ಆರ್ ದಾಖಲಾಗಿದೆ.
ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕರು ಆಗಿರುವ ಶ್ರೀ ವರ್ತ ವಿರುದ್ಧ ಬಿಎನ್ಎಸ್ 353 ( 2) ರ ಅಡಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಕುರುಬ ಸಮಾಜದ ಮುಖಂಡ ಸಿದ್ದಣ್ಣ ತೇಜಿ ಅವರು ನೀಡಿದ್ದ ದೂರಿನ ಅನ್ವಯ ಪೊಲೀಸರು ದೂರು ದಾಖಲಿಸಿದ್ದಾರೆ.
ತಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಶ್ರೀವಾಸ್ತ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು
ಸಿದ್ದಣ್ಣ ತೇಜಿ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎ. ಸಲೀಂ ಅವರಿಗೆ ದೂರು ನೀಡಲಾಗಿತ್ತು.
ಅದರ ಅನ್ವಯ ಪೊಲೀಸರು ದೂರು ದಾಖಲಿಸಿದ್ದಾರೆ.
ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶ್ರೀ ವತ್ಸ ಅವರುಗಳು ಜಾತಿ ನಿಂದನೆ ಮಾಡಿದ್ದಾರೆಂದು ದೂರು ದಾಖಲಿಸಲಾಗಿತ್ತು.
2025ರ ಸೆ.15 ಮತ್ತು 16ರಂದು ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಕಚೇರಿಯಲ್ಲಿ ಹಾಗೂ ಮೈಸೂರು ಶಾಸಕ ಶ್ರೀ ವತ್ಸ ಅವರು ಮೈಸೂರು ಹಾಗೂ ತಮ್ಮ ಹೇಳಿಕೆಗಳಲ್ಲಿ ಬೆಂಗಳೂರಿನಲ್ಲಿ ಮೀಸಲಾತಿ ಸಾಮಾಜಿಕ ಜಾಲತಾಣಗಳಲ್ಲಿ ಕುರುಬರ ಎಸ್ ६३ ವಿಚಾರದಲ್ಲಿ ವಿರೋಧಿಸುತ್ತಿದ್ದಾರೆ.
ಅಲ್ಲದೇ ರಾಜ್ಯದ ಮುಖ್ಯಮಂತ್ರಿಯನ್ನು ವಿರೋಧಿಸುವ ಭರದಲ್ಲಿ ಇಡೀ ರಾಜ್ಯದಲ್ಲಿ ಇರುವ ಕುರುಬ ಸಮಾಜಕ್ಕೆ ಅವಮಾನ ಹಾಗೂ ದೌರ್ಜನ್ಯ ಮಾಡಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳ ಮೂಲಕ ಪರಿಶಿಷ್ಟ ಪಂಗಡದವರು ಹಾಡೂ ವಾಲ್ಮೀಕಿ ಸಮಾಜದವರು ಕುರುಬ ಸಮಾಜದ ಮೇಲೆ ದಂಗೆ ಏಳಬೇಕು ಎನ್ನುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡಲಿದೆ. ಸಮಾಜದಿಂದ ಮತ್ತೊಂದು ಒಂದು ಸಮಾಜವನ್ನು ಪ್ರಚೋದಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಿದ್ದಾರೆ. ಇದೇ ರೀತಿ ಮುಂದುವರೆದರೆ ರಾಜ್ಯದಲ್ಲಿ ಅಶಾಂತಿ, ಜೀವಹಾನಿ ಸಾರ್ವಜನಿಕ ಕಟ್ಟಡ ಆಸ್ತಿಪಾಸ್ತಿ ಆಸ್ತಿ ಪಾಸ್ತಿ ಹಾನಿಯಾಗಿ ಜನಜೀವನ ಅಸ್ತವ್ಯಸ್ಥವಾಗಲಿದೆ ಎಂದು ಎಫ್‌ಐಆರ್ ನಲ್ಲಿ ವಿವರಿಸಿರುವುದು ಗೊತ್ತಾಗಿದೆ.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…