ಚಿತ್ರದುರ್ಗ : ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆ ಜಿಲ್ಲಾ ಎನ್ ಎಸ್ ವಿ ಶಿವಮೊಗ್ಗದ ಜಯನಗರ ಠಾಣೆಗೆ ದೂರು ನೀಡಿದ್ದು, ಎಫ್ ಆರ್ ದಾಖಲು ಮಾಡಲಾಗಿದೆ.
ಕರ್ನಾಟಕ ರಾಜ್ಯ 10ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಶುಕ್ರವಾರ ಹೊರತುಪಡಿಸಿ ಬೆಳಿಗ್ಗೆ ಸೆಷನ್ ನಲ್ಲಿ ಎಲ್ಲಾ ಪರೀಕ್ಷೆಗಳು…ಏಕೆ.? ಓಹ್.. ನಮಾಜ್ ಗೆ ಸಮಯವೇ” ಎಂದು ಚಕ್ರವರ್ತಿ ಸೂಲಿಬೆಲೆ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದರು.