ರಾಜ್ಯ

ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್‌ ಎಫ್‌ಐಆರ್‌ ದಾಖಲು

ವಿಜಯಪುರ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್‌ ಗುಂಬಜ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹುಬ್ಬಳ್ಳಿಯಲ್ಲಿ ಏಪ್ರಿಲ್‌.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್‌ ಅವರು, ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್‌ ಪೈಗಂಬರ್‌ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಆರೋಪಿಸಿ ವಿಜಯಪುರ ಗೋಲ್‌ ಗುಂಜ್‌ ಪೊಲೀಸ್‌ ಠಾಣೆಯಲ್ಲಿ ಮೊಹಮ್ಮದ್‌ ಹನ್ನಾನ್‌ ಎಂಬುವವರು ದೂರು ದಾಖಲಿಸಿದ್ದಾರೆ.

ಶಾಸಕ ಯತ್ನಾಳ್‌ ಅವರು ಹೇಳಿದ್ದೇನು?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮ ಭಾಷಣದಲ್ಲಿ ದಿ.ಬಾಬಾ ಸಾಹೇಬ್‌ ಠಾಕ್ರೆ ನಿವಾಸದಲ್ಲಿ ಮಹಮ್ಮದ್‌ ಪೈಗಂಬರ್‌ ಜನಿಸಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯೂ ಮುಸಲ್ಮಾನರ ಧಾರ್ಮಿಕ ಭಾವವನೆಗಳಿಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago