ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆದರಿಕೆ ಮತ್ತು ನಿಂದನೆ ಆರೋಪ ಸಂಬಂಧ ಕೇಸು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ದೂರು ನೀಡಿದ್ದಾರೆ. ಫೋನ್ ಕರೆಯ ಮೂಲಕ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.
ಡಾಗ್ ಸತೀಶ್ ಸ್ನೇಹ ಬಿಡಬೇಕೆಂದು ಬೆದರಿಕೆ ಹಾಕಿದ್ದಾರೆ. ಮೊಬೈಲ್‌ಗೆ ದೂರುದಾರರ ಕಾರಿನ ಫೋಟೋ ಕಳುಹಿಸಿ ಮೆಸೇಜ್ ಮೂಲಕ ಬೆದರಿಕೆ ಹಾಕಲಾಗಿದೆ.
ನಾನು ರಜತ್ ಕಾಲ್ ಮಾಡುತ್ತಿದ್ದೇನೆ. ವಾಪಸ್ ಕಾಲ್ ಮಾಡ್ತೀರಾ? ಇಲ್ಲ ನಾವೇ ಒಳಗೆ ನುಗ್ಗಬೇಕಾ ಎಂದು ಮೆಸೇಜ್ ಹಾಕಿದ್ದಾರೆ. ಕಾನ್ಫರೆನ್ಸ್ ಕಾಲ್‌ನಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರು ನೀಡಲಾಗಿದೆ.
ಗಿರೀಶ್ ಕುಮಾರ್ ದೂರಿನ ಮೇರೆಗೆ ರಜತ್ ಮತ್ತು ಕಿರಣ್ ವಿರುದ್ಧ ದೂರು ದಾಖಲಿಸಲಾಗಿದೆ.
ಚೆನ್ನೈ: ತಮಿಳು ನಟ ದಳಪತಿ ವಿಜಯ್ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ. 27…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…
ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…
ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ…
ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…
ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…