ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಅವರು ರಸ್ತೆಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನಟ ದರ್ಶನ್ ಅವರ ಕರಿಯ ಸಿನಿಮಾದ ಸ್ಟೈಲ್‌ನಲ್ಲಿ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುವ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ವಿನಯ್ ಗೌಡ ಮತ್ತು ರಜತ್ ಕಿಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ರೀಲ್ಸ್ ಅನ್ನು ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಅವರಿಬ್ಬರ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಇದನ್ನು ಬುಜ್ಜಿ ಎನ್ನುವ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ವಿಡಿಯೋ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ಸಲುವಾಗಿ ಈ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…
ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…
ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ…
ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.…
ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…
ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…