ರಾಜ್ಯ

ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ವಿನಯ್‌ಗೌಡ, ರಜತ್‌: ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಅವರು ರಸ್ತೆಯಲ್ಲಿ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ಹಿನ್ನೆಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನಟ ದರ್ಶನ್‌ ಅವರ ಕರಿಯ ಸಿನಿಮಾದ ಸ್ಟೈಲ್‌ನಲ್ಲಿ ಲಾಂಗ್‌ ಹಿಡಿದು, ಕಣ್ಣಿಗೆ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುವ ರೀಲ್ಸ್‌ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ರೀಲ್ಸ್‌ ಅನ್ನು ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಅವರಿಬ್ಬರ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಇದನ್ನು ಬುಜ್ಜಿ ಎನ್ನುವ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ವಿಡಿಯೋ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ಸಲುವಾಗಿ ಈ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

4 hours ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

4 hours ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

4 hours ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

4 hours ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

4 hours ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

4 hours ago