Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಪುನೀತ್‌ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇಂದು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆ ಮುಂದೆ ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.

ಠಾಣೆ ಮುಂದೆ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಸವೇಶ್ವರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪೊಲೀಸ್‌ ಠಾಣೆಯಲ್ಲಿ ಪ್ರತಾಪ್‌ ಸಿಂಹ ಹಾಗೂ ಪುನೀತ್ವಿ‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

 

Tags: