ಬೆಂಗಳೂರಿನಲ್ಲಿನ ಮಾಲ್ ಹಾಗೂ ವಿವಿಧ ಶಾಪ್‌ಗಳಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಆಂಗ್ಲ ಭಾಷೆಯ ಬೋರ್ಡ್‌ಗಳು ಇರುವ ಕಾರಣ ಸಿಡಿದೆದ್ದಿದ್ದ ಕನ್ನಡ ಪರ ಸಂಘಟನೆಗಳು ಇಂದು ( ಡಿಸೆಂಬರ್ 27 ) ಕನ್ನಡ ಫಲಕಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಕನ್ನಡ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದವು.
ಈ ಅಭಿಯಾನದಡಿಯಲ್ಲಿ ಕರವೇ ಕಾರ್ಯಕರ್ತರು ಹಲವೆಡೆ ಆಂಗ್ಲ ಭಾಷೆಯಲ್ಲಿದ್ದ ಬೋರ್ಡ್‌ಗಳನ್ನು ಒಡೆದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದರು. ಈ ವೇಳೆ ನಗರದ ಲಾವೆಲ್ಲೆ ರಸ್ತೆಯಲ್ಲಿ ಬೋರ್ಡ್‌ಗಳನ್ನು ಒಡೆದು ಹಾಕಿದ ಕಾರಣ 15 ಕರವೇ ಕಾರ್ಯಕರ್ತರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 506, 143, 147, 427, RW 41 ಹಾಗೂ PDLP Act 2a ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸದ್ಯ ಎಲ್ಲಾ 15 ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಇತರೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅತ್ತ ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರ ಮೇಲೆ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ಹೇಳಿದ್ದೇನೆ ಎಂದು ಸಂಜೆಯೇ ಹೇಳಿಕೆ ನೀಡಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…