ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧ್ರುವಸರ್ಜಾ ವಿರುದ್ಧ 3 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿಬಂದಿದೆ.
ಜಗ್ಗುದಾದ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ನಟ ಧ್ರುವಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ತಮಗೆ ವಂಚನೆ ಆಗಿದೆ ಎಂದು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದೆ.
3 ಕೋಟಿ ರೂಪಾಯಿ ವಂಚನೆ ಪ್ರಕರಣ ಇದಾಗಿದ್ದು, ಬಡ್ಡಿ ಸೇರಿದಂತೆ ಆ ಹಣ ಈಗ 9 ಕೋಟಿ ರೂಪಾಯಿ ಆಗಿದೆ ಎಂದು ರಾಘವೇಂದ್ರ ಹೆಗ್ಡೆ ಗಂಭೀರ ಆರೋಪ ಮಾಡಿದ್ದಾರೆ.
ಹೊಸ ಸಿನಿಮಾದ ಶೂಟಿಂಗ್‌ಗೆ ಬರುವುದಾಗಿ 3.15 ಕೋಟಿ ಅಡ್ವಾನ್ಸ್ ಹಣ ಪಡೆದು ಶೂಟಿಂಗ್‌ಗೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಸ್ಕ್ಪಿಪ್ಟ್ ರೈಟರ್‌ಗಳಿಗೂ ಧ್ರುವ ಸರ್ಜಾ ಹಣ ಕೊಡಿಸಿದ್ದರಂತೆ. ಇದನ್ನು ಸೇರಿದರೆ ರಾಘವೇಂದ್ರ ಅವರ ಕೈಯಿಂದ 3.43 ಕೋಟಿ ರೂಪಾಯಿ ಹಣ ನೀಡಿದ್ದರು ಎನ್ನಲಾಗಿದೆ.





