ರಾಜ್ಯ

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕಾರು ಓವರ್‌ ಟೇಕ್‌ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ವಿರುದ್ಧ ದಾಬಸ್‌ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ.

ಓವರ್‌ ಟೇಕ್‌ ಮಾಡುವ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್‌ ಬಳಿ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸಲ್ಮಾನ್‌, ಸೈಫ್‌, ಇಲಿಯಾಜ್‌, ಗುಲಷಿರ್‌ ಉನ್ನೀಸಾ ಎಂಬುವವರು ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಹೆಗಡೆ ಕಾರಿನಲ್ಲಿದ್ದ ನಾಲ್ವರನ್ನೂ ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.

ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಬೆದರಿಕೆ ಇರುವ ಕಾರಣ ಗನ್‌ ತೆಗೆದಿರೋದಾಗಿ ಗನ್‌ಮ್ಯಾನ್‌ ಶ್ರೀಧರ್‌ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಜಿ ಸಂಸದರು ಪ್ರಕರಣದಲ್ಲಿ ಭಾಗಿಯಾಗಿದ್ದ ಸುದ್ದಿ ಹರಡುತ್ತಿದ್ದಂತೆ ಪೊಲೀಸ್‌ ಠಾಣೆಯಲ್ಲಿ ಜನಸಮೂಹ ಜಮಾಯಿಸಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ.ಬಾಬಾ ಅವರು, ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಎ.1 ಅನಂತ್‌ ಕುಮಾರ್‌, ಎ2 ಗನ್‌ ಮ್ಯಾನ್‌, ಎ3 ಚಾಲಕ ಆರೋಪಿಗಳಾಗಿದ್ದಾರೆ. ತನಿಖೆ ಮಾಡಿ ಅಗತ್ಯವಿದ್ದರೆ ಬಂಧಿಸುತ್ತೇವೆ. ಇದರೊಂದಿಗೆ ಗಾಯಾಳುಗಳ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

9 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

9 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

10 hours ago