ರಾಜ್ಯ

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮೇ.12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್‍ನಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ.

ಹೀಗಾಗಿ ಬಿಎನ್‍ಎಸ್ 353(2)ರಡಿ ಪ್ರಕರಣದಡಿ ಎಫ್‍ಐಆರ್ ದಾಖಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago