ರಾಜ್ಯ

ಮದ್ದೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲು: ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ

ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಫ್‌ಐಆರ್‌ ದಾಖಲಾಗಿರುವ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿರವಿ ಅವರು, ಕೇಸ್‌ ನನಗೆ ಹೊಸದಲ್ಲ. ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ. ಪ್ರೀತಿಗೆ ಪ್ರೀತಿ ಕಲ್ಲಿಗೆ-ಕಲ್ಲು ಎಂದು ಹೇಳಿದ್ದೆ. ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ ಎಂದರು.

ಇದನ್ನು ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌

ಇನ್ನು ಇಂತಹ ನೂರು ಕೇಸ್‌ ಬಂದರೂ ನಾನು ನಿಭಾಯಿಸುತ್ತೇನೆ. ನಾನೇನು ಇದಕ್ಕೆ ಹೆದರಿ ಕೂರಲ್ಲ ಎಂದು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಪ್ರಕರಣದ ಹಿನ್ನೆಲೆ: ಮದ್ದೂರಿನಲ್ಲಿ ನಿನ್ನೆ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಎಂಎಲ್‌ಸಿ ಸಿ.ಟಿ.ರವಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಅವರ ದೂರಿನನ್ವಯ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

7 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

9 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

9 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

9 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

9 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

9 hours ago