ಹಾಸನ: ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.
ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್ ಕಾರ್ಯಕರ್ತ ಠಾಣೆಗೆ ದೂರು ನೀಡಿದ್ದ. ಬಳಿಕ ದೂರು ನೀಡಿದವ ಹಣಕ್ಕಾಗಿ ಸೂರಜ್ ವಿರುದ್ಧ ಆರೋಪಿಸುತ್ತಿದ್ದಾನೆ ಎಂದು ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದನು.
ಇದೀಗ ಸೂರಜ್ ಆಪ್ತ ಶಿವಕುಮಾರ್ ವಿರುದ್ಧವೇ ಕೇಸ್ ದಾಖಲಾಗಿದೆ. ಶಿವಕುಮಾರ್ ಶ್ರೀರಾಮ್ ಫೈನಾನ್ಸ್ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ೬ ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2,91,916 ರೂ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇನ್ನು ಈ ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ತಲೆ ಮರಿಸಿಕೊಂಡಿದ್ದಾನೆ.





