ರಾಜ್ಯ

ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಎಫ್‌ಐಆರ್​

ಹಾಸನ: ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.

ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರು ನೀಡಿದ್ದ. ಬಳಿಕ ದೂರು ನೀಡಿದವ ಹಣಕ್ಕಾಗಿ ಸೂರಜ್‌ ವಿರುದ್ಧ ಆರೋಪಿಸುತ್ತಿದ್ದಾನೆ ಎಂದು ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದನು.

ಇದೀಗ ಸೂರಜ್‌ ಆಪ್ತ ಶಿವಕುಮಾರ್​ ವಿರುದ್ಧವೇ ಕೇಸ್‌ ದಾಖಲಾಗಿದೆ. ಶಿವಕುಮಾರ್ ಶ್ರೀರಾಮ್ ಫೈನಾನ್ಸ್​ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ೬ ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2,91,916 ರೂ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇನ್ನು ಈ ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್‌ ತಲೆ ಮರಿಸಿಕೊಂಡಿದ್ದಾನೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

5 mins ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

10 mins ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

14 mins ago

ಜೂಜಾಟ, ಮದ್ಯ ಅಕ್ರಮ ಮಾರಾಟಕ್ಕೆ ಲಕ್ಷ  ರೂ. ದಂಡ!

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…

23 mins ago

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

8 hours ago