Mysore
14
few clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಬೆಂಗಳೂರಿನಲ್ಲಿ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ಜೆಡಿಎಸ್‌ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರು ಹಾಗೂ ಬೈಕ್‌ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.

ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯಿರುವ ಜಕ್ಕರಾಯನಕೆರೆ ಗ್ರೌಂಡ್‌ನಲ್ಲಿ ಪಾರ್ಕ್‌ ಮಾಡಿದ್ದರು. ಈ ಜಾಗಕ್ಕೆ ಇಂದು ಇದ್ದಕ್ಕಿದ್ದಂತೆ ಬೆಂಕಿ ಬಿದ್ದಿದೆ.

ಪರಿಣಾಮ ಕಾರು ಹಾಗೂ ಬೈಕ್‌ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಯಾರೋ ಸಿಗರೇಟ್‌ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದು ಹೋಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

 

 

Tags:
error: Content is protected !!