ಬೆಂಗಳೂರು: ನಗರದ ರಾಜ್‌ಕುಮಾರ್ ರಸ್ತೆಯಲ್ಲಿನ ಹೋಂಡಾ ಬೈಕ್ ಶೋ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ 30ಕ್ಕೂ ಅಧಿಕ ಎಲೆಕ್ಟ್ರಾನಿಕ್ ಸ್ಕೂಟರ್‌ಗಳನ್ನು ಭಸ್ಮವಾಗಿವೆ ಎಂದು ಮೂಲಗಳು ತಿಳಿಸಿವೆ.
ಈ ಘಟನೆಯೂ ಇಂದು(ಜನವರಿ.27) ಸುಮಾರು ಮಧ್ಯಾಹ್ನದ ವೇಳೆಗೆ ನಡೆದಿದ್ದು, ಬೈಕ್ ಶೋ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ.
ಇನ್ನೂ ಈ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಘಟನೆ?
ರಾಜಾಜಿನಗರದಲ್ಲಿರುವ ಶುಕ್ರ ಮೋಟರ್‌ಸ್ ಎಂಬ ಬೈಕ್ ಶೋ ರೂಂಗೆ ಇಂದು ಇದ್ದಕಿದ್ದ ಹಾಗೇ ಬೆಂಕಿ ಹತ್ತಿಕೊಂಡಿದ್ದು, ಈ ವೇಳೆ ವಕಿನೋವಾ ಕಂಪನಿಯ ಎಲೆಕ್ಟ್ರಾನಿಕ್ ಬೈಕ್‌ಗಳು ಇದ್ದವು. ಈ ಅಗ್ನಿ ದುರಂತದಿಂದ ಸುಮಾರು 30ಕ್ಕೂ ಅಧಿಕ ಎಲೆಕ್ಟ್ರಾನಿಕ್ ಬೈಕ್‌ಗಳು ಭಸ್ಮವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬ್ಯಾಟರಿ ಚಾರ್ಜ್ ಹಾಕುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.