ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ದಾಖಲು ಮಾಡಲಾಗಿದೆ.
15 ವರ್ಷದ ಮೂವರು ಮಕ್ಕಳು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಣ್ಣಿನ ದೃಷ್ಟಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.





