Mysore
32
few clouds

Social Media

ಸೋಮವಾರ, 20 ಏಪ್ರಿಲ 2026
Light
Dark

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ: ಅಧಿಕಾರಿಗಳ ಜೊತೆ ಸಿಎಂ ಸಿದ್ದು ಸಭೆ

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ಕೂಡ ತೆರಳಿದ್ದಾರೆ.

ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!