Mysore
15
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಬೆಂಗಳೂರು ವಿಮಾನ ನಿಲ್ದಾಣ ಕಂಪನಿ ಬಿಐಎಎಲ್‌ಗೆ ಸೂಚನೆ ನೀಡಿದ ಮಹೇಶ್‌ ಜೋಶಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟೇಕಾಫ್‌ ಹಾಗೂ ಲ್ಯಾಂಡಿಂಗ್‌ ವೇಳೆ ಮೊದಲು ಕನ್ನಡದಲ್ಲಿ ಪ್ರಕಟಣೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ಅವರು ಬಿಐಎಎಲ್‌ಗೆ ಸೂಚನೆ ನೀಡಿದ್ದಾರೆ.

ಬಿಐಎಎಲ್‌ನ ಎಂಡಿ ಹಾಗೂ ಸಿಇಓ ಹರಿ ಮಾರಾರ್‌ ಅವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಮಹೇಶ್‌ ಜೋಶಿ ಅವರು, ಮೊದಲು ಕನ್ನಡವನ್ನು ಪ್ರೋತ್ಸಾಹಿಸಬೇಕು. ಇದಕ್ಕಾಗಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಮಹೇಶ್‌ ಜೋಶಿ ಅವರು, ಕನ್ನಡ ರಾಜ್ಯೋತ್ಸವ ನವೆಂಬರ್.‌1ರೊಳಗೆ ಈ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇದು ಜಾರಿಗೆ ಬರಲು ಸ್ವಲ್ಪ ಸಮಯ ತೆಗೆದುಕೊಳ್ಳಲಿದೆ. ಈ ಬಗ್ಗೆ ನಾನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

 

Tags:
error: Content is protected !!