ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ವೇಳೆ ಮೊದಲು ಕನ್ನಡದಲ್ಲಿ ಪ್ರಕಟಣೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಬಿಐಎಎಲ್‌ಗೆ ಸೂಚನೆ ನೀಡಿದ್ದಾರೆ.
ಬಿಐಎಎಲ್‌ನ ಎಂಡಿ ಹಾಗೂ ಸಿಇಓ ಹರಿ ಮಾರಾರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಮಹೇಶ್ ಜೋಶಿ ಅವರು, ಮೊದಲು ಕನ್ನಡವನ್ನು ಪ್ರೋತ್ಸಾಹಿಸಬೇಕು. ಇದಕ್ಕಾಗಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಮಹೇಶ್ ಜೋಶಿ ಅವರು, ಕನ್ನಡ ರಾಜ್ಯೋತ್ಸವ ನವೆಂಬರ್.1ರೊಳಗೆ ಈ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇದು ಜಾರಿಗೆ ಬರಲು ಸ್ವಲ್ಪ ಸಮಯ ತೆಗೆದುಕೊಳ್ಳಲಿದೆ. ಈ ಬಗ್ಗೆ ನಾನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…