ರಾಜ್ಯ

ಹಾವೇರಿಯಲ್ಲಿ ಇಲಿ ಜ್ವರಕ್ಕೆ ವೃದ್ಧ ಬಲಿ

ಹಾವೇರಿ  :  ರಾಜ್ಯದಲ್ಲಿ ಒಂದು ತಿಂಗಳಿಂದ ಡೆಂಗ್ಯೂ ಜ್ವರದ ಕಾಟ ಒಂದು ಕಡೆಯಾದ್ರೆ , ಡೆಂಗ್ಯೂ ಜೊತೆಗೆ ಇಲಿ ಜ್ವರ ಮತ್ತಷ್ಟು ಆತಂಕವನ್ನುಂಟು ಮಾಡುತ್ತಿದೆ . ಇಲಿ ಜ್ವರ ಹಾಗೂ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಾವೇರಿಯ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ನಿನ್ನೆಯಷ್ಟೆ ೧೨ ವರ್ಷದ ಬಾಲಕನಲ್ಲಿ ಈ ಇಲಿ ಜ್ವರ ಕಂಡುಬಂದಿತ್ತು. ಇದೀಗ ಹಾವೇರಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಹಾನಗಲ್‌ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್‌ ಎಂಬ ವೃದ್ಧ ಕಳೆದ ೧೫ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.  ಮಂಗಳೂರಿನ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆ ನಡೆಸಿದಾಗ ಇಲಿ ಜ್ವರ ಇರುವುದು ದೃಢವಾಗಿದೆ. ಇಲಿ ಜ್ವರದ ಜೊತೆಗೆ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಇಲಿ ಜ್ವರದಿಂದ ವೃದ್ಧ ಸಾವನ್ನಪ್ಪಿರುವುದಕ್ಕೆ ಹಾವೇರಿ ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಶುರುವಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅವಕಾಶ ವಂಚಿತ ಚೆನ್ನೈ ಮಕ್ಕಳಿಗೆ ಪ್ರವಾಸ ಭಾಗ್ಯ

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…

2 mins ago

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

10 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

10 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

11 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

11 hours ago