ಇನ್ನೊಂದು ವಾರದಲ್ಲಿ ರೈತರ ಖಾತೆಗೆ ಬರಪರಿಹಾರದ ಮೊದಲ ಕಂತಿನ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಬರಪರಿಹಾರ ಹಾಗೂ ಅತಿವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನತೆಗಳಿದ್ದವು. ಬೆಳೆ ಬೆಳೆಯದ ಎಷ್ಟೋ ಜನರಿಗೆ ಪರಿಹಾರದ ಹಣ ಸಿಗುತ್ತಿತ್ತು. ನಿಜವಾಗಿಯೂ ಬೆಲೆಗಳು ಹಾನಿಯಾದ ರೈತನಿಗೆ ಪರಿಹಾರ ಸಿಗುತ್ತಿರಲಿಲ್ಲ. ಈ ಹಿಂದಿನ ಸರ್ಕಾರ ಇದ್ದಾಗ ಹಾಗೂ ನಾನು ಈ ಹಿಂದೆ ಕೃಷಿ ಸಚಿವನಾಗಿದ್ದಾಗಲೂ ಇಂತಹದ್ದನ್ನು ನೋಡಿದ್ದೇನೆ. ಯಾರದ್ದೋ ಜಮೀನು, ಇನ್ಯಾರದ್ದೋ ಖಾತೆಗೆ ಹಣ ಜಮಾವಣೆಯಾಗಿದೆ. ರೈತರು ಬೆಳೆದಿದ್ದ ಬೆಳೆಯೇ ಬೇರೆ, ಅವರಿಗೆ ಬಂದಿದ್ದ ಪರಿಹಾರದ ಹಣವೇ ಬೇರೆ. ಅಧಿಕಾರಿಗಳು ಬೆಲೆ ಮಾಹಿತಿ ಸಂಗ್ರಹಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲವನ್ನೂ ಸರಿ ಮಾಡಿ ಬೆಳೆ ಸಮೀಕ್ಷೆ ಆಧಾರದಲ್ಲಿ ಹಣ ಪಾವತಿ ಮಾಡಲಾಗಲಿದೆ ಎಂದು ತಿಳಿಸಿದರು.
ಇದನ್ನು ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಮುಂದಿನ ಒಂದು ವಾರದಲ್ಲಿ ಮೊದಲ ಕಂತಿನ ಹಣ ಜಮಾ ಆಗಲಿದೆ. 12 ಲಕ್ಷ ರೈತರಿಗೆ ಹಣ ಪಾವತಿ ಮಾಡಲು ಆರ್‌ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20 ಲಕ್ಷ ರೈತರ ಪೇಮೆಂಟ್ ಆರ್ಡರ್ ಅನ್ನು ಮುಂದಿನ ದಿನಗಳಲ್ಲಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರಪರಿಹಾರ ಹಣಕ್ಕಾಗಿ ಮನವಿ ಮಾಡಿದ್ದು, ಇನ್ನೂ ಸಹ ಹಣ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2000 ಹಣವನ್ನು ನೀಡಲು ಮುಂದಾಗಿದೆ ಎಂದೂ ಸಹ ತಿಳಿಸಿದರು.
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…
ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು…
ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…
ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…