ರಾಜ್ಯ

ಮೊದಲು ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಪರಿಹಾರ ಕೊಡಿ: ವಿಜಯೇಂದ್ರ

ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ ಬೆಳೆ ನಾಶವಾಗಿದೆ. 4 ಎಕರೆಗೆ ಪರಿಹಾರ ಕೊಡಿಸಿ ಎಂದು ಕೇಳಿದರೆ, ನನ್ನದೇ 40 ಎಕರೆ ಇದೆ, ನನ್ನ ಬೆಳೆಯೂ ಸಂಪೂರ್ಣ ನಾಶವಾಗಿದೆ. ಪರಿಹಾರ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊದಲು ಅವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ಸಂತ್ರಸ್ಥರಿಗೆ ಕೊಡಲಿ ಎಂದು ವ್ಯಂಗ್ಯವಾಡಿದರು.

ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ಕೊಡಬೇಕು. ಒಣಭೂಮಿಗೆ ಎನ್‍ಡಿಆರ್‌ಎಫ್‌ ನಿಯಮದಡಿ ಹೆಕ್ಟೇರ್ಗೆ 6 ಸಾವಿರ ರೂ. ಪರಿಹಾರ ಇತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪ್ರವಾಹ ಪೀಡಿತರಿಗೆ ರಾಜ್ಯದಿಂದ ಎನ್‍ಡಿಆರ್‍ಎಫ್ ಮಾದರಿಯ ನೆರವು ನೀಡಿದ್ದರು. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪ ಮಾಡುತ್ತಿಲ್ಲ. ಆ ಕಾಳಜಿಯನ್ನು ತೋರಿಸಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿರುವ ರೈತರ ಬಗ್ಗೆ ಈಗ ನೀವು ಕಾಳಜಿ ತೋರಿಸದೇ ಇದ್ದರೆ ಇನ್ಯಾವಾಗ ಕಾಳಜಿ ತೋರಿಸುತ್ತೀರಿ ಎಂದು ಪ್ರಶ್ನಿಸಿದರು.

ಇದನ್ನು ಓದಿ : ಬಿಡದಿ ರೈತರ ಹೋರಾಟ; ಡಿಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಇನ್ನು ಜಾತಿ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯ ನಂತರದಲ್ಲಿ ಹಿಂದಿನ ಕಾಂಗ್ರೆಸ್, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್ ಸಿಂಗ್ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್ ಗಾಂಧಿ ಅದನ್ನು ವಿರೋಧಿಸಿದ್ದರು ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

29 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

31 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

33 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

37 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

41 mins ago