ರಾಜ್ಯ

ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ‌ಮೀನುಗಾರರು ತಮ್ಮ ಜೀವದ ಹಂಗನ್ನೇ ತೊರೆದು‌ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡುತ್ತಾರೆ ಎಂದರು.

ಮೀನುಗಾರರು ಕಡಲಿನಲ್ಲಿ ಹಗಲೂ ರಾತ್ರಿ ಲೆಕ್ಕಿಸದೆ ತಮ್ಮ ಜೀವವನ್ನು ಪಣಕಿಟ್ಟು ದುಡಿದು ತಮ್ಮ ಕುಟುಂಬವನ್ನು ಸಾಕುವುದಕ್ಕಾಗಿ ನೈಸರ್ಗಿಕ ಸಂಪನ್ಮೂಲಗಳ ಸಧ್ಬಳಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವು ಹಲವು ಯೋಜನೆಗಳಡಿ ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಇದರ ಸದುಪಯೋಗವನ್ನು ಮೀನುಗಾರರು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ‌

ಮಳೆಗಾಲದ ಸಮಯದಲ್ಲಿ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಮೀನುಗಾರರ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ರಾಜ್ಯದ ವಂತಿಗೆಯನ್ನು ದ್ವಿಗುಣಗೊಳಿಸಲಾಗಿದೆ. ಮೀನುಗಾರರಿಗೆ ಪ್ರತೀ ವರ್ಷ ಜೀವರಕ್ಷಕ ಸಾಧನಗಳಾದ ಲೈಫ್‌ ಬಾಯ್‌ & ಲೈಫ್‌ ಜಾಕೆಟ್‌ ಗಳನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು.

ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡಬೇಕು, ಕಳೆದ 5 ವರ್ಷಗಳಲ್ಲಿ ‌140 ಜನರು ಪ್ರಾಣ‌ ಕಳೆದುಕೊಂಡಿದ್ದಾರೆ. ಮೀನುಗಾರಿಕೆ ಎಂದರೆ ಬೆಂಕಿ‌ ಜೊತೆ ಸರಸವಾಡಿದಂತೆ, ಜೀವ ರಕ್ಷಕ ಗಳನ್ನು ಸೂಕ್ತವಾಗಿ ಬಳಸಿಕೊಂಡು ಮೀನುಗಾರಿಕೆ ಮಾಡಬೇಕು. ಸಿದ್ದರಾಮಯ್ಯನವರು ಈ ಹಿಂದೆ ಸಿಎಂ ಆಗಿದ್ದಾಗಲೂ ಮೀನುಗಾರರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು, ಈಗಲೂ ಸರ್ಕಾರ ಮೀನುಗಾರರ ಪರ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
ಇದೇ ವೇಳೆ ಮೀನುಗಾರರಿಗೆ ನಿವೇಶನ ಹಕ್ಕು ಪತ್ರ ಹಾಗೂ ಮನೆ ಮಂಜೂರಾತಿ ಹಕ್ಕು ಪತ್ರವನ್ನು ಸಚಿವರು ವಿತರಿಸಿದರು.‌ ‌ಜೊತೆಗೆ ಉಳಿತಾಯ ಪರಿಹಾರ ಯೋಜನೆಯಡಿ ಫಲಾನುಭವಿಗಳಿಗೆ ತಲಾ ಮೂರು ಸಾವಿರದಂತೆ ಚೆಕ್ ವಿತರಣೆ, ಜೀವರಕ್ಷಕ ಸಾಧನಗಳನ್ನು ವಿತರಿಸಿದರು.‌

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೆರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ‌ರಮೇಶ್ ಕಾಂಚನ್, ರಾಜ್ಯ ಸಂಕಷ್ಟ ಪರಿಹಾರ ಸಮಿತಿ ಸದಸ್ಯರಾದ ಮದನ್ ಕುಮಾರ್, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ‌ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್‌, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ‌ವಿವೇಕ್, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ: 18 ಲಕ್ಷದ 69 ಸಾವಿರ ರೂ. ಸಂಗ್ರಹ

ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ…

12 hours ago

ಎಥೆನಾಲ್‌ ಮಿಶ್ರಣ: 63 ಸ್ಯಾಂಪಲ್‌ ಪರೀಕ್ಷೆಗೆ ಕಳಿಸಿದರೂ ಫಲಿತಾಂಶ ಕೊಟ್ಟಿಲ್ಲ ಎಂದ ರಿಜ್ವಾನ್‌ ಅರ್ಷದ್‌!

ಬೆಂಗಳೂರು: ಪೆಟ್ರೋಲ್‌ನಲ್ಲಿ ಮಿತಿ ಮೀರಿದ ಎಥೆನಾಲ್‌ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್‌ಗಳ ಫಲಿತಾಂಶ ನೀಡಿಲ್ಲ ಎಂದು…

12 hours ago

ಬಿಳಿಗಿರಿರಂಗನ ಬೆಟ್ಟದ ವರದತ್ತಿ ಮಂಟಪೋತ್ಸವ: ವರದೇ ನಾಯಕರ ಕುಲಪರಂಪರೆಯ ಜೀವಂತ ಸಾಕ್ಷಿ

ಯಳಂದೂರು: ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ತಿರುವೆಂಗಳನಾಥ ಸ್ವಾಮಿ ದೇವಾಲಯಕ್ಕೂ ಯಳಂದೂರು ಮೂಲದ ವರದೇ…

13 hours ago

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: ಮೂರು ತಿಂಗಳಲ್ಲಿ ಹೊಸ ಆ್ಯಪ್‌ ಎಂದ ಸಚಿವ ಯು.ಟಿ. ಖಾದರ್‌!

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್‌ ಆ್ಯಪ್‌ ತರಲು ಯೋಜಿಸಲಾಗಿದೆ.…

13 hours ago

ಬಾಳೆಗೊನೆಯಲ್ಲಿ ಡ್ರಗ್ಸ್‌ ಸಾಗಾಟ ಪ್ರಕರಣ: ನಂಜನಗೂಡು ನಂಟಿನ ಬಗ್ಗೆ ಎಸ್ಪಿ ಸ್ಪಷ್ಟನೆ

ಮೈಸೂರು: ಬಾಳೆಗೊನೆ ಮೂಲಕ ಡ್ರಗ್ಸ್‌ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ…

15 hours ago

ಬಿಜೆಪಿಯವರು ರೀಲ್ಸ್‌ ರಾಜರು’: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

ಬೆಂಗಳೂರು:  ‘ಬಿಜೆಪಿಯವರು ರೀಲ್ಸ್‌ ರಾಜರು. ಬೆಂಗಳೂರಿಗೆ ಹೊಸ ಯೋಜನೆ ತಂದಿದ್ದಾರಾ?’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಮೆಟ್ರೋ ವಿಚಾರದಲ್ಲಿ…

16 hours ago