ಬೆಂಗಳೂರು: ಇಡೀ ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ, ದಾವಣಗೆರೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆಯ ವರದಿ ಸಂಬಂಧ ಮಾಹಿತಿ ನೀಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಸಿಲಿಕಾನ್ ಸಿಟಿಯಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿರಲಿದ್ದು, ಹೈಅಲರ್ಟ್ ಘೋಷಣೆ ಮಾಡಲಾಗಿದೆ.