ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ.
ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೀದರ್, ಗುಲ್ಬರ್ಗಾ, ರಾಯಚೂರು, ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





