ರಾಜ್ಯ

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ: ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ.

ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ಬೀದರ್‌, ಗುಲ್ಬರ್ಗಾ, ರಾಯಚೂರು, ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

3 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

3 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

3 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

3 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

6 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

6 hours ago