ರಾಜ್ಯ

ಇಂದಿನಿಂದ(ಮೇ.19) ರಾಜ್ಯದಲ್ಲಿ ಐದು ದಿನ ಧಾರಾಕಾರ ಮಳೆ

ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ ಸಿಂಚವಾಗಿದೆ. ನಗರದಲ್ಲಿ ತುಂತುರು ಮಳೆ ಬರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಮೈಸೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೈಸೂರು ನಗರದ ಕುವೆಂಪುನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ, ಗಂಗೋತ್ರಿ, ಒಂಟಿಕೊಪ್ಪಲ್‌, ಮಂಡಿ ಮೊಹಲ್ಲಾ, ಎನ್‌ ಆರ್‌ ಮೊಹಲ್ಲಾ, ಕೆ.ಆರ್‌ ಸರ್ಕಲ್‌, ಅಗ್ರಹಾರ ಸೇರಿದಂತೆ ಹಲವೆಡೆ ಬೆಳಿಗ್ಗೆಯೇ ಧಾರಾಕಾರ ಮಳೆಯಾಗಿದೆ. ಅಲ್ಲದೇ ಸಂಜೆಯೂ ಸಹ ಸಾಧಾರಣ ಮಳೆಯಾಗಿದೆ. ಇವತ್ತು ಭಾನುವಾರ ಎಂದು ಸುತ್ತಾಡುತ್ತಿದ್ದವರಿಗೆ ಮಳೆಯ ಸಿಂಚನವಾಗಿದೆ. ಮಳೆಯಿಂದ ವಾಹನ ಸವಾರರು ತೊಂದರೆ ಅನುಭವಿಸಿದ್ದು, ಅಲ್ಲಲ್ಲಿ ವಾಹನದಟ್ಟನೆ ಕಂಡುಬಂತು.

ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಮಳೆಯಾಗಿದೆ. ಕೊಡಗಿನಲ್ಲಿ ಭರ್ಜರಿ ಮಳೆಯಾಗಿದ್ದು, ಚಾಮರಾಜನಗರದ ಕೋಳ್ಳೆಗಾಲದಲ್ಲಿ ಸಾಧಾರಣ ಮಳೆಯಾಗಿದೆ.

ಐದು ದಿನ ಅಲರ್ಟ್:
ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಇಂದಿನಿಂದ ಐದು ದಿನ ೧೭ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಇನ್ನು ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

2 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

2 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

3 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

3 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

3 hours ago