ಕೊಪ್ಪಳ : ಜಿಲ್ಲೆಯ ಕುಕನೂರು ತಾಲ್ಲೂಕು ಭಾನುಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವಪ್ಪಿದ್ದರು. ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್ ಮಾಹಿತಿ ನೀಡಿದ್ದಾರೆ.
ಪೊಲೀಸ್ ಶರಣಪ್ಪ ಅವರು ಮೊಮ್ಮಗಳ ಹುಟ್ಟುಹಬ್ಬದ ಪ್ರಯುಕ್ತ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ ಸುಮಾರು 10.30 ರ ವೇಳೆಗೆ ಎಲ್ಲರೂ ಕುಟುಂಬ ಸಮೇತರಾಗಿ ಹಿಂದಿರುತ್ತಿದ್ದ ವೇಳೆ ಈ ಅಪಘಅತ ಸಂಭವಿಸಿದೆ. ಪರಿಣಾಮ ಅಪಘಾತದಲ್ಲಿ ಸ್ಕಾರ್ಪಿಯೋ ವಾಹನದಲ್ಲಿದ್ದ ಒಂದೇ ಕುಟುಂಬದವರ ಪೈಕಿ 5 ಜನ ಸಾವನ್ನಪ್ಪಿ ಮಕ್ಕಳು ಸೇರಿದಂತೆ ನಾಲ್ಕು ಮಂದಿ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.