ರಾಜ್ಯ

ಮೇಕೆದಾಟುಗೆ ಈಜಲು ಹೋದ ಐವರು ವಿದ್ಯಾರ್ಥಿಗಳು ನೀರುಪಾಲು

ಕನಕಪುರ: ಇಲ್ಲಿನ ಮೇಕೆದಾಟು ನದಿಯಲ್ಲಿ ಈಜಲು ಹೋದ ಐವರು ವಿದ್ಯಾರ್ಥಿಗಳು ನೀರುಪಾಲಾಗಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ಇಬ್ಬರು ಯುವಕರು ಹಾಗೂ ಮೂವರು ವಿದ್ಯಾರ್ಥಿಗಳು ಮೇಕೆದಾಟುಗೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಆಳವಾದ ಜಾಗದಲ್ಲಿ ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನ ರಭಸಕ್ಕೆ ಸಿಕ್ಕಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಪೀಣ್ಯ ಎರಡನೇ ಹಂತದ ಹರ್ಷಿತ, ವರ್ಷ, ಸ್ನೇಹ, ಅಭಿಷೇಕ್‌ ಹಾಗೂ ತೇಜಸ್‌ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಪೊಲೀಸ್‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಐವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಈ ಬಗ್ಗೆ ಸಾತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

11 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

13 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

13 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

13 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

14 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

17 hours ago