16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸ ಪ್ರಶಸ್ತಿ
ಬೆಂಗಳೂರು : ಭಾರತದ ಹೆಸರಾಂತ ಚಲನಚಿತ್ರ ನಟಿ ಶಬನಾ ಅಜ್ಮಿ ಅವರನ್ನು ಕರ್ನಾಟಕ ಸರ್ಕಾರದಿಂದ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ 2024-25ನೇ ಸಾಲಿನ ಬೆಂಗಳೂರು 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶಬನಾ ಅಜ್ಮಿ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶಬನಾ ಅಜ್ಮಿ ಅವರು ಅತ್ಯುತ್ತಮ ನಟನೆಗಾಗಿ ಐದು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದು, ಅತಿ ಹೆಚ್ಚು ಪ್ರಶಸ್ತಿ ಪಡೆದ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
ರಾಷ್ಟ್ರೀಯ ಪ್ರಶಸ್ತಿಗಳು: 1975 – ಅಂಕುರ್, 1983 – ಆರ್ಥರ್, 1984 – ಖಂದಾರ್, 1985 – ಪಾರ್, 1999 – ಗಾಡ್ಮದರ್ ಚಿತ್ರಗಳಿಗೆ ರಾಷ್ಟ್ರೀಯ ಚಲನಚಿತ್ರ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಪ್ರಶಸ್ತಿಗಳು: 1993 ಉತ್ತರ ಕೊರಿಯಾದಲ್ಲಿ ಲಿಬಾಸ್‍ಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ, 1994 ಇಟಲಿಯ ಟೌರಿಮಾ ಆರ್ಟೆ ಉತ್ಸವದಲ್ಲಿ ಗೌತಮ್ ಘೋಸ್ ಅವರ ಪಟಾಂಗ್‍ಗೆ ಅತ್ಯುತ್ತಮ ನಟಿ ಪ್ರಶಸ್ತಿ, 1996 ಚಿಕಾಗೊ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಂಕಿಯ ಅತ್ಯುತ್ತಮ ನಟಿಗಾಗಿ ಸಿಲ್ವರ್ ಹ್ಯೂಗೋ ಪ್ರಶಸ್ತಿ, 1996 ಫೀಚರ್ ಫಿಲ್ಮ್‍ನಲ್ಲಿ ಅತ್ಯುತ್ತಮ ನಟಿ, ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…