ರಾಜ್ಯ

ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು : ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷವು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ವಿರುದ್ಧ ಹರಿಹಾಯ್ದಿದೆ.

ಇದನ್ನೂ ಓದಿ:-ಅಟಾರ್ನಿ ಜನರಲ್‌ ಆಗಿ ಆರ್.ವೆಂಕಟರಮಣಿ ಮರುನೇಮಕ

ಉತ್ತರ ಕರ್ನಾಟಕ ಭಾಗದ ಉಸ್ತುವಾರಿ ಸಚಿವರೇ ಎಲ್ಲಿದ್ದೀರಿ? ಎಲ್ಲಿ ಮಾಯಾವಾಗಿದ್ದೀರಿ?
ಭೀಮಾ ನದಿಯ ಪ್ರವಾಹಕ್ಕೆ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್‌, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಹಲವು ಜಿಲ್ಲೆಯಲ್ಲಿ ಸಾವು ನೋವುಗಳಾಗಿವೆ. ನೆರೆಯಿಂದ ಗ್ರಾಮಗಳಿಗೆ ಗ್ರಾಮಗಳೇ ಮುಳುಗಡೆ ಆಗಿವೆ. ರಸ್ತೆ, ಸೇತುವೆಗಳು ಮುಳುಗಿವೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ ಎಂದು ಜೆಡಿಎಸ್ ಕಳವಳ ವ್ಯಕ್ತಪಡಿಸಿದೆ.

ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಉಸ್ತುವಾರಿ ಮಂತ್ರಿಗಳ ಪತ್ತೆಯೇ ಇಲ್ಲ. ನಿಮ್ಮ ಜಿಲ್ಲೆಗಳು ಸಂಪೂರ್ಣ ಮುಳುಗಿರುವಾಗ ಎಲ್ಲಿ ಓಡಿ ಹೋಗಿದ್ದೀರಿ? ಜನರ ದುಃಖ, ಆರ್ತನಾದ ನಿಮಗೆ ಕೇಳುತ್ತಿಲ್ಲವೇ? ನೆರೆ ಸಂತ್ರಸ್ತರಿಗೆ ಆಶ್ರಯ ಕೇಂದ್ರಗಳನ್ನು ನಿರ್ಮಿಸಿ ಅಗತ್ಯ ಸೌಲಭ್ಯ ಕಲ್ಪಿಸಿ, ನೆರೆ ಹಾನಿಯಿಂದ ನಷ್ಟಕ್ಕೊಳಗಾದವರಿಗೆ ತ್ವರಿತವಾಗಿ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago