hd kumarsw̧amy
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರವು ಕರ್ನಾಟಕದ ಪರ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಅವರು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:-ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.
ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆ ನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯ ವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.
ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು ಎಂದು ಹೇಳಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…