cm siddaramaiah
ಬೀದರ್: ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ.
ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಈಶ್ವರ್ ಖಂಡ್ರೆ ಮಾತನಾಡಿದ್ದಾರೆ. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಖುತುಮಾನಗಳಲ್ಲಿ ಏರುಪೇರುಗಳಾಗಿದ್ದು, ಪರಿಣಾಮ ಬೀದರ್ ಜಿಲ್ಲೆ ಮೇಲೂ ಆಗುತ್ತಿದೆ.
ಇದನ್ನು ಓದಿ : ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್ ಬಿತ್ತನೆ ಕಾರ್ಯ ನಡೆದಿದೆ.
ಆದರೆ ಈ ತಿಂಗಳು ಸುರಿದ ವಿಪರೀತ ಮಳೆಯಿಂದ ರಾಶಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲಾ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದರು.
ಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿರುವ ಪರಿಣಾಮ ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅನೇಕ ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿವೆ.
ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವು ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವಿನಂತಿ ಮಾಡಿದ್ದೇನೆ ಎಂದರು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬೀದರ್‌ನಲ್ಲಿ ಮಳೆಹಾನಿ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…