ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಫ್ಲವರ್ ಶೋಗೆ ಸಿಎಸ್ ಶಾಲಿನಿ ರಜನೀಶ್ ಚಾಲನೆ ನೀಡಿದ್ದಾರೆ.
10 ವರ್ಷಗಳ ಬಳಿಕ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದೆ.
ಇಂದಿನಿಂದ ಡಿಸೆಂಬರ್.27ರವರೆಗೆ ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಮೇಳ ನಡೆಯಲಿದೆ. ಆಕರ್ಷಕ ಕಲಾಕೃತಿಗಳು, ವಿವಿಧ ಬಗೆಯ ಹೂವುಗಳು ಕಬ್ಬನ್ ಪಾರ್ಕ್‌ನಲ್ಲಿ ಮೇಳೈಸಿದ್ದು, ಜನರು ಸಂಭ್ರಮದಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ.
ಫ್ಲವರ್ ಶೋಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿದೆ. ದೊಡ್ಡವರಿಗೆ 30 ರೂಪಾಯಿ ಹಾಗೂ ಮಕ್ಕಳಿಗೆ 10 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ.
ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನದ ಜೊತೆಗೆ ಕಲಾ, ಸಂಸ್ಕೃತಿ ಹಬ್ಬವನ್ನೂ ಆಯೋಜಿಸಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪುಷ್ಪ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.




