ರಾಜ್ಯ

ಕಬ್ಬನ್‌ ಪಾರ್ಕ್‌ನಲ್ಲಿ ಫ್ಲವರ್‌ ಶೋ: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ

ಬೆಂಗಳೂರು: ಕಬ್ಬನ್‌ ಪಾರ್ಕ್‌ನಲ್ಲಿ ಫ್ಲವರ್‌ ಶೋಗೆ ಸಿಎಸ್‌ ಶಾಲಿನಿ ರಜನೀಶ್‌ ಚಾಲನೆ ನೀಡಿದ್ದಾರೆ.

10 ವರ್ಷಗಳ ಬಳಿಕ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದೆ.

ಇಂದಿನಿಂದ ಡಿಸೆಂಬರ್.‌27ರವರೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಮೇಳ ನಡೆಯಲಿದೆ. ಆಕರ್ಷಕ ಕಲಾಕೃತಿಗಳು, ವಿವಿಧ ಬಗೆಯ ಹೂವುಗಳು ಕಬ್ಬನ್‌ ಪಾರ್ಕ್‌ನಲ್ಲಿ ಮೇಳೈಸಿದ್ದು, ಜನರು ಸಂಭ್ರಮದಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ.

ಫ್ಲವರ್‌ ಶೋಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿದೆ. ದೊಡ್ಡವರಿಗೆ 30 ರೂಪಾಯಿ ಹಾಗೂ ಮಕ್ಕಳಿಗೆ 10 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ.

ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನದ ಜೊತೆಗೆ ಕಲಾ, ಸಂಸ್ಕೃತಿ ಹಬ್ಬವನ್ನೂ ಆಯೋಜಿಸಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪುಷ್ಪ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

3 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

3 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

3 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

3 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

3 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

3 hours ago