ಮಡಿಕೇರಿ : ನಗರದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ.ಇ.ಸಾಕಮ್ಮ ಪ್ರಭಾಕರ ಎಂಬವರ ಮೇಲೆ ರವಿವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಗೆ ಹಿಂಭಾಗದಿಂದ ಅಕ್ರಮವಾಗಿ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದರೋಡೆ ಮಾಡಿದ್ದ ಎಂದು ಹೇಳಲಾಗಿದೆ.
ಕ್ಷಿಪ್ರ ಕಾರ್ಯಾಚರಣೆ- ಘಟನೆ ನಡೆದ ಬಳಿಕ ಎಸ್‌ಪಿ ಕೆ. ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರಾದರೆ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲಾ ಹೊಟೇಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.
ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್‌ಬಿ ಸಿಬ್ಬಂದಿಗಳನ್ನು ಒಳಗೊಂಡಂತೆ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು, ನಗರದಂಚಿನ ಇಬ್ಬನಿ ರೆಸಾರ್ಟ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ವಿಕಾಸ್ ಜೋರ್ಡಿಯಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ…
ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ…
ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ…
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…