ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ.
ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರು ಜೈಲಿಗೆ ಭೇಟಿ ನೀಡಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತಿ ಎರಡು–ಮೂರು ದಿನಗಳಿಗೊಮ್ಮೆ ತಜ್ಞರು ಭೇಟಿ ನೀಡಲಿದ್ದು, ಅಗತ್ಯ ವೈದ್ಯಕೀಯ ಉಪಕರಣಗಳನ್ನು ತಂದು ಬ್ಯಾರಕ್‌ನಲ್ಲೇ ಸುಮಾರು ಒಂದೂವರೆ ಗಂಟೆಗಳ ಕಾಲ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದುಬಂದಿದೆ.
ಈ ಹಿಂದೆಯೂ ಇದೇ ಆಸ್ಪತ್ರೆಯ ವೈದ್ಯರಿಂದ ದರ್ಶನ್‌ಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆಗ ಹಂತ ಹಂತವಾಗಿ ನೀಡಿದ ಫಿಸಿಯೋಥೆರಪಿಯಿಂದ ನಟ ದರ್ಶನ್‌ಗೆ ಬೆನ್ನುನೋವು ಕಡಿಮೆಯಾಗಿತ್ತು.
ಇದೀಗ ಮತ್ತೆ ಚಿಕಿತ್ಸೆ ಆರಂಭವಾಗಿದ್ದು, ದರ್ಶನ್‌ಗೆ ಬೆನ್ನುನೋವಿನಿಂದ ಕೊಂಚ ನಿರಾಳತೆ ಸಿಕ್ಕಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್‌ಗೆ ಎಥನಾಲ್ ಮಿಶ್ರಣ…
ಮೈಸೂರು: ಕಾಂಗ್ರೆಸ್ ಕಾರ್ಯಕರ್ತರ ಕುರಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಈ ಬಾರಿಯ ದೀಪಾವಳಿ ಜಾತ್ರಾ ಮಹೋತ್ಸವ ಮಲೆ ಮಹದೇಶ್ವರ ಬೆಟ್ಟದ…
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ…
ಗುವಾಹಟಿ: ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್ ರೈಲೊಂದು ಹಳಿತಪ್ಪಿದ ಪರಿಣಾಮ ಕೆಲ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಅಸ್ಸಾಂನ ಡಿಗಾರು ರೈಲು ನಿಲ್ದಾಣದ ಬಳಿ…
ಬೆಂಗಳೂರು: ಪಡಿತರ ಚೀಟಿದಾರರೇ, ಇನ್ನೂ ಇ-ಕೆವೈಸಿ ಮಾಡಿಸಿಲ್ಲವೇ? ನಿಮಗೊಂದು ಸಿಹಿಸುದ್ದಿ! ಇ-ಕೆವೈಸಿ ಪೂರ್ಣಗೊಳಿಸಲು ನಿಗದಿಪಡಿಸಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.…