ಬೆಂಗಳೂರು: ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿ ಚುರುಕು ಮುಟ್ಟಿಸಿದೆ.
ರಾಜ್ಯದ 305 ಪಿಜಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳು 127 ಪಿಜಿಗಳಲ್ಲಿ ಅನುಮಾನಗೊಂಡು ಆಹಾರ ಪದಾರ್ಥಗಳನ್ನು ಸಂಗ್ರಹಿಸಿದ್ದರು.
ಸಂಗ್ರಹಿಸಿದ್ದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ವೇಳೆ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ನಾಲ್ಕು ಪಿಜಿಗಳಿಗೆ ಒಟ್ಟು 21,000 ರೂಪಾಯಿ ದಂಡ ವಿಧಿಸಲಾಗಿದೆ.
ಈ ಮೂಲಕ ಪಿಜಿಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಸೂಚನೆ ನೀಡಿದ್ದು, ಒಂದು ವೇಳೆ ಅಶುಚಿತ್ವ ಕಂಡುಬಂದರೆ ಪಿಜಿಗಳನ್ನೇ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.





