Mysore
22
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ಬೆಳಗಾವಿಯಲ್ಲಿ ಉಗ್ರ ಸ್ವರೂಪ ಪಡೆದ ಅನ್ನದಾತರ ಪ್ರತಿಭಟನೆ

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.

ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು, ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ. ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ : ಆರ್.ಅಶೋಕ

ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದೆ. ಕರವೇ ಕಾರ್ಯಕರ್ತರು ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕಬ್ಬು ಬೆಳೆಗಾರರಿಗೆ 3500 ರೂ ಬೆಂಬಲ ಬೆಲೆ ನಿಗದಿ ಮಾಡಬೇಕು. ಎಲ್ಲಾ ರೈತರ ಸಂಕಷ್ಟ ಆಲಿಸುವಂತೆ ಒತ್ತಾಯಿಸಿದ್ದಾರೆ.

Tags:
error: Content is protected !!