ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.
ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು, ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ. ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಇದನ್ನು ಓದಿ: ಲಾಲ್‌ಬಾಗ್ ಉಳಿಸಲು ನವೆಂಬರ್ 2 ರಂದು ಪ್ರತಿಭಟನೆ : ಆರ್.ಅಶೋಕ
ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದೆ. ಕರವೇ ಕಾರ್ಯಕರ್ತರು ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕಬ್ಬು ಬೆಳೆಗಾರರಿಗೆ 3500 ರೂ ಬೆಂಬಲ ಬೆಲೆ ನಿಗದಿ ಮಾಡಬೇಕು. ಎಲ್ಲಾ ರೈತರ ಸಂಕಷ್ಟ ಆಲಿಸುವಂತೆ ಒತ್ತಾಯಿಸಿದ್ದಾರೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…